Breaking
23 Mar 2026, Mon

ಬೆಳ್ತಂಗಡಿ ತಾಲೂಕಿನ ಮಿನಿ ವಿಧಾನಸೌಧದ ಬಳಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ, ಪ್ರಕರಣ ದಾಖಲು

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಮಿನಿ ವಿಧಾನಸೌಧದ ಬಳಿ ನ.3 ರಂದು ನಡೆದಿದೆ.

ಸೋಮವಾರ ಸಂಜೆ 4:30 ರ ಸುಮಾರಿಗೆ ಧರ್ಮಸ್ಥಳ ಗ್ರಾಮದ ಇಬ್ರಾಹಿಂ (32) ಎಂಬವರಿಗೆ ಉಜಿರೆ ಟಿ.ಬಿ ಕ್ರಾಸ್ ನಿವಾಸಿಯಾಗಿರುವ ಅಫ್ರೀದ್ ಅಪ್ಪಿ ಎಂಬಾತ ಆಟೋ ರಿಕ್ಷಾದಲ್ಲಿ ಬಂದು ಯಾವುದೋ ಆಯುಧದಿಂದ ಬಲಕಣ್ಣಿಗೆ ಮತ್ತು ಎಡಕಣ್ಣಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಸಾರ್ವಜನಿಕರು ಸೇರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ವೇಳೆ ತಕ್ಷಣ ಗಾಯಾಳು ಇಬ್ರಾಹಿಂ ಅವರನ್ನು ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಹಳೆ ದ್ವೇಷದ ವಿಚಾರದಲ್ಲಿ ಇವರಿಬ್ಬರ ಮಧ್ಯೆ ಜಗಳ ನಡೆದು ಹಲ್ಲೆಯ ಮಟ್ಟಕ್ಕೆ ತಲುಪಿದೆ ಅಂತ ಹೇಳಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *