Breaking
23 Mar 2026, Mon

ಸುಳ್ಯದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಚಾಲಕ ಆಸ್ಪತ್ರೆಯಲ್ಲಿ ಸಾವು

ಸುಳ್ಯ: ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಚಿಕಿತ್ಸೆ ಫಲಿಸದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನ.5 ರಂದು ನಡೆದಿದೆ.

ಮೃತರನ್ನು ಅಟೋಚಾಲಕ ಪ್ರಭಾಕರ್ ಎಂದು ಗುರುತಿಸಲಾಗಿದೆ.

ನ.3ರಂದು ಸಂಜೆ 6.30ರ ಸುಮಾರಿಗೆ ಸುಳ್ಯದ ಜಟ್ಟಿಪಳ್ಳದಲ್ಲಿ ಈ ಘಟನೆ ನಡೆದಿತ್ತು. ಈ ವೇಳೆ ತಕ್ಷಣ ಪ್ರಭಾಕರ್ ಅವರನ್ನು ಅಲ್ಲಿನ ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿತ್ತು.

ಆದ್ರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆಯ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *