Breaking
10 May 2026, Sun

ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಬಶೀರ್ ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ರೆಂಕೆದಗುತ್ತು ಎಂಬಲ್ಲಿ ನ.6 ರಂದು ನಡೆದಿದೆ.

ತಾಲೂಕಿನ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಬಶೀರ್ ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಬಶೀರ್ ಅವರು ನೇಣುಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *