Breaking
10 May 2026, Sun

ವೈಯುಕ್ತಿಕ ಸಮಸ್ಯೆಯನ್ನು ಪೂಜೆ ಮಾಡಿ ಪರಿಹರಿಸುವ ಜಾಹೀರಾತು ನೀಡಿ 24 ಲಕ್ಷ ಪಂಗನಾಮ ಹಾಕಿದವ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಇನ್ಸ್ಟಾಗ್ರಾಂನಲ್ಲಿ ವೈಯುಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ ವ್ಯಕ್ತಿಯೊಬ್ಬರಿಂದ 24 ಲಕ್ಷ ಹಣ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬೆಂಗಳೂರು ನಿವಾಸಿ ವಾಸುದೇವ ಆರ್ ಎಂದು ಗುರುತಿಸಲಾಗಿದೆ.

ಆರೋಪಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ತತ್ಕ್ಷಣದಲ್ಲಿ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂಪಾಯಿ ಸೈಬರ್ ವಂಚನೆ ನಡೆಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *