ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ಖಳನಟ ಹರೀಶ್ ರಾಯ್ ಇಂದು (ನ. 6) ನಿಧನರಾಗಿದ್ದಾರೆ.
ಓಂ, ನಲ್ಲ ಸೇರಿದಂತೆ ಕೆಜಿಎಫ್, ಕೆಜಿಎಫ್ 2 ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.

ಕ್ಯಾನ್ಸರ್ ಸಮಸ್ಯೆಯಿಂದ ಹೊಟ್ಟೆ ಉಬ್ಬರಗೊಂಡು, ದೇಹ ಕೃಷಗೊಳ್ಳುವ ಪರಿಸ್ಥಿತಿ ಉಂಟಾಗಿದ್ದು ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು ಸಹ ಅಂಗಲಾಚಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.




