ಸುಳ್ಯ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ ನ.5 ರಂದು ನಡೆದಿದೆ.
ಗಗನ್ (17) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ. ಈತ ಮೂಲತಃ ಕಳೆಂಜದವನಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯವೆಸಗಿದ್ದಾನೆ ಎಂದು ಶಂಕಿಸಲಾಗಿದೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.





