ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಹಲವಾರು ರೀತಿಯ ಆರೋಪಗಳನ್ನು ಮಾಡುತ್ತಿರುವ ಸಚಿವ ಭೈರತಿ ಸುರೇಶ್ ಅವರ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.ಮುಡಾ ವಿಷಯದಲ್ಲಿ ಹಲವಾರು ಮಹತ್ವದ ದಾಖಲೆಗಳನ್ನು ಸಚಿವ ಭೈರತಿ ಸುರೇಶ ಸುಟ್ಟಿರುವದು ನಿಜ. ಇದೇ ಹಿನ್ನೆಲೆಯಲ್ಲಿ ಈಗ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಬಿಜೆಪಿ ವರಿಷ್ಠರು ಕೊಟ್ಟಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವದು ನನ್ನ ಕರ್ತವ್ಯ.
ಈ ಶೋಭಾ ಕರಂದ್ಲಾಜೆ ಭ್ರಷ್ಟಾಚಾರ ಮಾಡಿಲ್ಲ, ಮಾಡುವದೂ ಇಲ್ಲ. ನಾನು ಸಚಿವ ಸುರೇಶ ವಿರುದ್ಧ ಖಚಿತವಾಗಿ ಆರೋಪ ಮಾಡಿದ ಮೇಲೆ ನನ್ನ ವಿರುದ್ಧ ಭ್ರಷ್ಟಾಚಾರದ ಮಾತು ಆಡುತ್ತಿದ್ದಾರೆ ಎಂದರು.