Breaking
22 Mar 2026, Sun

ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯದ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನ.05 ರಂದು ಸೇವಾಂಜಲಿ ಸಭಾಗೃಹದಲ್ಲಿ ಕ್ಷಯ ರೋಗಿಗಳಿಗೆ ಆಹಾರ ದವಸಧಾನ್ಯದ ಕಿಟ್ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ಜಿ.ಮಂಜುನಾಥ್ ಅವರು ಬದಲಾದ ಜೀವನಶೈಲಿ, ಆಹಾರ ಪದ್ದತಿ, ಪರಿಸರ ಮಾಲಿನ್ಯದಿಂದ ರೋಗಗಳು ಹೆಚ್ಚಾಗುತ್ತಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ನಮ್ಮ ಆದ್ಯತೆಯಾಗಬೇಕು ಎಂದರು. ಕ್ಷಯ ಗುಣಮುಖವಾಗುವ ಕಾಯಿಲೆಯಾಗಿದ್ದು ಸಮಯಕ್ಕೆ ಸರಿಯಾದ ಔಷಧೋಪಚಾರ ಮಾಡಬೇಕು ಎಂದ ಅವರು ಸೇವಾಂಜಲಿಯ ಸೇವಾ ಕಾರ್ಯವನ್ನು ಶ್ಲಾಘಿಸಿದರು.

ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್ ಮಾತನಾಡಿ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದ ವ್ಯಕ್ತಿಗಳು ಸುಲಭವಾಗಿ ಕ್ಷಯ ರೋಗಕ್ಕೆ ತುತ್ತಾಗುತ್ತಾರೆ. ಎರಡು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು ಇದ್ದು ದೇಹದ ತೂಕ ಕಡಿಮೆಯದಾಗ ವೈದ್ಯರಿಂದ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಪ್ರಮುಖರಾದ ಆನಂದ ಆಳ್ವ ಟ್ರಸ್ಟಿ ಸುರೇಶ್ ರೈ ಪೆಲಪಾಡಿ, ಉದ್ಯಮಿ ಇಕ್ಬಾಲ್ ಅತ್ತಾಯಿ ಉಪಸ್ಥರಿತರಿದ್ದರು.

ಈ ಸಂದರ್ಭದಲ್ಲಿ ಅರ್ಕುಳ ರಘುನಾಥ್ ಪೂಜಾರಿ, ಬಾಲಕೃಷ್ಣ ರೈ ದೇವಸ್ಯ,ಕೃಷ್ಣ ತುಪ್ಪೆಕಲ್ಲು, ಸುರೇಶ್ ಟೈಲರ್, ಪದನಾಭ ಕಿದೆಬೆಟ್ಟು,ಆರ್. ಎಸ್. ಜಯ ರಾಮಲ್ ಕಟ್ಟೆ, ದಿನೇಶ್ ತುಂಬೆ,ಪ್ರಶಾಂತ್ ತುಂಬೆ, ವಿಕ್ರಂ ಬರ್ಕೆ, ಶಿವರಾಜ್ ಸುಜೀರ್ ಉಪಸ್ಥಿತರಿದ್ದರು. ದೇವದಾಸ್ ಶೆಟ್ಟಿ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *