ಮಂಗಳೂರು :ನಗರದ ಪ್ರಸಿದ್ಧ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನ.05 ಕಾರ್ತಿಕ ಹುಣ್ಣಿಮೆಯಂದು ಶ್ರೀ ಕ್ಷೇತ್ರದ ಪುಷ್ಕರಣೆಯಲ್ಲಿ ಗಂಗಾ ಪೂಜೆ ಜರಗಿತು.

ದೇಗುಲದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸಂಜೆ ಶ್ರೀ ಲಲಿತಾ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಹೆಚ್ ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಆರ್. ಪದ್ಮರಾಜ್, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿಜಿ ಸುವರ್ಣ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.





