Breaking
22 Sep 2026, Tue

ಕರ್ತವ್ಯದಲ್ಲಿದ್ದಾಗಲೇ ಕೆಎಸ್‌ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಕೆಎಸ್‌ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನ.5 ರಂದು ನಡೆದಿದೆ.

ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ.

ಸಂದೀಪ್ ಅವರು ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಅವರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಈ ವೇಳೆ ಪರೀಕ್ಷಿಸಿದ ವೈದ್ಯರು ಸಂದೀಪ್ ಅವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *