ಮಂಗಳೂರು: ಮದರಸಕ್ಕೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಬಜ್ಪೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ.

ಬೆಳಗ್ಗೆ ಮನೆಯ ಸಮೀಪದ ಮದರಸಕ್ಕೆ ತೆರಳಿ ವಾಪಸ್ ಮನೆಗೆ ಹಿಂದಿರುಗುತ್ತಿದ್ದ ವೇಳೆ ಏಕಾಏಕಿ ಸುತ್ತುವರಿದ ಬೀದಿ ನಾಯಿಗಳು ಮಗುವಿನ ಕೆನ್ನೆ, ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ. ಬಾಲಕನ ಕೂಗು ಕೇಳಿ ಹೊರಬಂದ ತಾಯಿ ಮಗನನ್ನು ರಕ್ಷಿಸಿದ್ದಾರೆ.

ಬಳಿಕ ತಕ್ಷಣವೇ ಬಜ್ಪೆ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಟೀಲಿನ ದುರ್ಗ ಸಂಜೀವಿನಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



