ಕಡಬ: ತಾಲೂಕಿನ ಕಲ್ಲುಗುಡ್ಡೆ ಎಂಬಲ್ಲಿ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.6 ರಂದು ರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್(14) ಎಂದು ಗುರುತಿಸಲಾಗಿದೆ.

ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





