Breaking
22 Mar 2026, Sun

ನಿಯಂತ್ರಣ ತಪ್ಪಿದ ಸ್ಕೂಟರ್ : ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು

ಕಾಸರಗೋಡು: ಕುಂಬಳೆ ಪೂಕಟ್ಟೆಯಲ್ಲಿ ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಗೋಡೆಗೆ ಡಿಕ್ಕಿಯಾಗಿ ವಿದ್ಯಾರ್ಥಿನಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವತಿಯನ್ನ ಬಂಬ್ರಾಣ ಚೂರಿತ್ತಡ್ಕ ನಿವಾಸಿ ರಝಾಕ್ ರಂಶೀನಾ ದಂಪತಿಯ ಪುತ್ರಿ ರಿಸ್ವಾನ (15 ವ) ಎಂದು ಗುರುತಿಸಲಾಗಿದೆ.

ಸ್ಕೂಟರಿನಲ್ಲಿ ರಿಸ್ವಾನಾ ಮತ್ತು ಗೆಳತಿ ಟ್ಯೂಷನ್ ಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನೂ ತಕ್ಷಣವೇ ಕುಂಬಳೆ ಸೇವಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಗಂಭೀರ ಗಾಯಗೊಂಡ ರಿಸ್ವಾನಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲಾಗಲಿಲ್ಲ.

Leave a Reply

Your email address will not be published. Required fields are marked *