Breaking
25 Sep 2026, Fri

ಹರೀಶ್ ಪೂಂಜರಿಂದ 20 ಲಕ್ಷ ಅನುದಾನ: ಮಿತ್ತೊಟ್ಟು–ಪಾರ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣ

ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಮಿತ್ತೊಟ್ಟು ಪಾರ ರಸ್ತೆಯು ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ಮೇಲಂತಬೆಟ್ಟು ಗ್ರಾಮದ ಮೂಡಲ ಭಾಗದ ಜನರ ಬಹು ಬೇಡಿಕೆಯ ರಸ್ತೆ ಅಭಿವೃದ್ಧಿಗೆ ನೀಡಿದ್ದ ಭರವಸೆಯಂತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರು ರೂ.20 ಲಕ್ಷ ಅನುದಾನ ಮಂಜೂರು ಮಾಡಿದ್ದು, ಆ ಮೊತ್ತದಿಂದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ.

ಕಾಮಗಾರಿಯನ್ನು ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡoಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ವೀಕ್ಷಣೆ ಮಾಡಿದರು.

Leave a Reply

Your email address will not be published. Required fields are marked *