Breaking
25 Sep 2026, Fri

ಮಣಿಪಾಲದ ಲಾಡ್ಜ್ ನಲ್ಲಿ ಅಪ್ರಾಪ್ತೆಯ ಜೊತೆಗಿದ್ದ ಯುವಕ ಅರೆಸ್ಟ್

ಉಡುಪಿ: ಯುವಕನೋರ್ವ ಅಪ್ರಾಪ್ತೆಯ ಜೊತೆ ಲಾಡ್ಜ್ನಲ್ಲಿ ಸಿಕ್ಕಿಬಿದ್ದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.

ಕಟಪಾಡಿ ಮಣಿಪುರದ ನಿವಾಸಿ, ಫೈಬರ್ ಡೋರ್ ನಿರ್ಮಿಸುವ ಕೆಲಸ ನಿರ್ವಹಿಸುತ್ತಿದ್ದ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.

ಮಾಹಿತಿ ತಿಳಿದು ಅಪ್ರಾಪ್ತೆಯ ಪೋಷಕರು ನೇರವಾಗಿ ಲಾಡ್ಜ್ಗೆ ಪೊಲೀಸರೊಂದಿಗೆ ದಾಳಿ ಮಾಡಿದ್ದಾರೆ.ಲಾಡ್ಜ್ಗೆ ಅಪ್ರಾಪ್ತೆಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶ್ರೀಶಾಂತ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.

ಈತ ಇನ್ನೋರ್ವ ಅಪ್ರಾಪ್ತೆಗೆ ಕೂಡ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಸದ್ಯ, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *