Breaking
25 Sep 2026, Fri

ಉಡುಪಿಯಲ್ಲಿ ರಸ್ತೆ ಬದಿ ನಿಲ್ಲಿಸಿದ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿಗಾಹುತಿ

ಉಡುಪಿ: ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ.07 ರಂದು ನಡೆದಿದೆ.

ರಸ್ತೆ ಬದಿ ಯಾರೋ ಇಬ್ಬರು ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ಹೋಗಿದ್ದು ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದರು. ಅಗ್ನಿ ಶಾಮಕ ಇಲಾಖೆಯ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ಬೆಂಕಿ ತಗುಲಿ ಎರಡೂ ವಾಹನಗಳು ಸಂಪೂರ್ಣ ಸುಟ್ಟು ಹೋಗಿದ್ದು ದ್ವಿಚಕ್ರ ವಾಹನದ ವಾರಸುದಾರರು ಪತ್ತೆಯಾಗಿಲ್ಲ. ಘಟನೆಗೆ ಕಾರಣ ಕೂಡ ತಿಳಿದುಬಂದಿಲ್ಲ. ಸ್ಥಳಕ್ಕೆ ಮಲ್ಪೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *