ಜಾರ್ಖಂಡ್: ರಾಂಚಿಯಲ್ಲಿರುವ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಿಂದ ಬಂದಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

17 ಸೆಕೆಂಡುಗಳ ಈ ವಿಡಿಯೋದಲ್ಲಿ ಇಬ್ಬರು ಕೈದಿಗಳು ನೃತ್ಯ ಮಾಡುತ್ತಿರುವುದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಜೈಲಿನಲ್ಲಿನ ಉನ್ನತಾಧಿಕಾರಿಗಳು ಈ ವಿಷಯದ ಬಗ್ಗೆ ಕೂಡಲೇ ತನಿಖೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಜೈಲು ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
ಈ ನಿಟ್ಟಿನಲ್ಲಿ ಸಹಾಯಕ ಜೈಲರ್ ದೇವನಾಥ್ ರಾಮ್ ಮತ್ತು ಜಮದಾರ್ ವಿನೋದ್ ಕುಮಾರ್ ಯಾದವ್ ಅವರನ್ನು ಇಲಾಖೆ ಅಮಾನತುಗೊಳಿಸಲಾಗಿದೆ.





