ಕಲಬುರಗಿ: ಬೈಕ್ ಮತ್ತು ಕಾರಿಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಬೀದರ್-ಶ್ರೀ ರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ನ.07ರಂದು ನಡೆದಿದೆ.

ಬೈಕ್ ಸವಾರ, ಸಹಸವಾರ ಹಾಗೂ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಲಬುರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





