ಪುತ್ತೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದ ಕಲ್ಲಂದಡ್ಕ ಎಂಬ ಸಾರ್ವಜನಿಕ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ.

ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





