ಚಿಕ್ಕಮಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.

ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದ್ದು ಕುಮಾರಪ್ಪ (69) ಮತ್ತು ಸತೀಶ್ (35) ಎಂಬವರು ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




