Breaking
21 Jun 2026, Sun

ವಿಟ್ಲದಲ್ಲಿ ಚರಂಡಿಯಲ್ಲಿ ವ್ಯಕ್ತಿ ಶವವಾಗಿ ಪತ್ತೆ

ವಿಟ್ಲ: ವ್ಯಕ್ತಿಯೊಬ್ಬರ ಮೃತದೇಹ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಚರಂಡಿಯೊಂದರಲ್ಲಿ ಪತ್ತೆಯಾದ ಘಟನೆ ನ.10 ರಂದು ವಿಟ್ಲದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ (55)ಮೃತಪಟ್ಟ ದುರ್ದೈವಿ.

ಅಡಿಕೆ ಸಂಸ್ಕರಣಾ ಘಟಕವೊಂದರಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ ಅವರು ಭಾನುವಾರ ರಾತ್ರಿ 9:30 ರ ನಂತರ ಕಾಣೆಯಾಗಿದ್ದರು. ಸೋಮವಾರ ಬೆಳಿಗ್ಗೆ, ಪಾದಚಾರಿಗಳು ಚರಂಡಿಯಲ್ಲಿ ಅವರ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ತಿಳಿದ ತಕ್ಷಣ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಠಾಣಾಧಿಕಾರಿ ರಾಮಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *