Breaking
23 Dec 2024, Mon

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಸಿದ್ದರಾಮ್ಯಯ ನೇತೃತ್ವದ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ.

ಅಕ್ಟೋಬರ್ 28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್​ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಣಯಿಸಲಾಗಿದ್ದು, ನಿವೃತ್ತ ಹೈ ಕೋರ್ಟ್​ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡಲು ಸುಪ್ರಿಂಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಚರ್ಚೆ‌ ನಡೆದಿದ್ದು, ಒಳ ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ನಿರ್ಣಯ ಮಾಡಿದೆ. ನಿವೃತ್ತ ಹೈ ಕೋರ್ಟ್, ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರದಿಂದ, ಆಯೋಗಕ್ಕೆ ಸೂಚನೆ ನೀಡಲಾಗಿದೆ. ಹೀಗಾಗಿ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದ್ದು, ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಶನ್ ಆದ್ರೆ ಆಯೋಗದರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *