Breaking
21 Jun 2026, Sun

ಪುತ್ತೂರಿನ ಮಂಜಲ್ಪಡು ಬಳಿ ಕಾರು ಮತ್ತು ಆಟೋ ನಡುವೆ ಅಪಘಾತ, ಮೂವರಿಗೆ ಗಂಭೀರ ಗಾಯ

ಪುತ್ತೂರು : ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮಂಜಲ್ಪಡು ಎಂಬಲ್ಲಿ ನಡೆದಿದೆ.

ಆಟೋದಲ್ಲಿದ್ದ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಪಜೀರ್ ನಿವಾಸಿ, ಸುನಿಲ್ ಪಿಂಟೋ(37), ಪಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಗಾಯಗೊಂಡವರು.

ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವು ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ ಗಾಯವಾಗಿದೆ. ಮೂವರಿಗೂ ಪುತ್ತೂರಿನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *