ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಪುನರುಚ್ಛರಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ನಾಯಕತ್ವದಲ್ಲಿ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾನು ಭಾಗವಹಿಸುವದಿಲ್ಲ. ಆದರೆ ನಮ್ಮ ಎನ್ ಡಿಎ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ ಎಂದರು.
ಸಿ.ಪಿ.ಯೋಗೇಶ್ವರ ಒಳ್ಳೆಯ ಮನುಷ್ಯ. ಇಲ್ಲಿ ಅವರಿಗೆ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಗೆ ಹೋಗಿದ್ದಾರೆ. ಸೋಲುತ್ತಾರೋ ಅಥವಾ ಗೆಲ್ಲುತ್ತಾರೋ ಗೊತ್ತಿಲ್ಲ ಎಂದರು.ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಚಾರದ ನೇತೃತ್ವ ವಹಿಸುವಂತೆ ಕೇಳಿದ್ದಾರೆ. ಆದರೆ ನನ್ನ ಬದಲಿಗೆ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಕೊಡುವಂತೆ ಕೇಳಿದ್ದೇನೆ. ಡಿ ಕೆ ಶಿವಕುಮಾರ್ ಪಾರ್ಟ್ ಟೈಮ್ ನೀರಾವರಿ ಸಚಿವ. ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡುತ್ತಿದ್ದಾರೆ. ಶಿವಕುಮಾರ್ ಬದಲಿಗೆ ಪೂರ್ಣ ಪ್ರಮಾಣದ ನೀರಾವರಿ ಸಚಿವರನ್ನು ಕೊಡಬೇಕು ಎಂದು ಒತ್ತಾಯಿಸಿದ್ದಾರೆ