Breaking
25 Sep 2026, Fri

ಉಳ್ಳಾಲದಲ್ಲಿ ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9 ರಂದು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ (22) ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ (24), ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ಎಂದು ಗುರುತಿಸಲಾಗಿದೆ.

ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ.

ಅಬ್ದುಲ್ ಶಕೀಬ್ ಹಾಗೂ ಸಬೀರ್ ಅಹಮ್ಮದ್, ಡ್ರೈವರ್ ಮತ್ತು ಪೈಂಟರ್ ಆಗಿದ್ದು, ಅವರು ಸ್ನೇಹಿತರಾಗಿದ್ದರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 6,000 ರೂ. ನಗದು, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *