Breaking
22 Mar 2026, Sun

ರಾಷ್ಟ್ರಮಟ್ಟದ ಕಬಡ್ಡಿ ಕ್ಯಾಂಪ್‌ಗೆ ಶಶಿಕಾಂತ್ ಸುಲ್ಕೇರಿ ಆಯ್ಕೆ

ಬೆಳ್ತಂಗಡಿ: ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

ಇವರು ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ರವರ ಪುತ್ರನಾಗಿದ್ದು ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 ನೇ ತರಗತಿ ವಿಧ್ಯಾರ್ಥಿ.

ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಸುವ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

ನ. 27 ರಿಂದ ಹರಿಯಾಣ ರಾಜ್ಯದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ನಡೆಯಲಿದ್ದು , ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯೊಬ್ಬ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಬಡ್ಡಿ ಕ್ಷೇತ್ರದಲ್ಲಿ ಹೊಸ ಭರವಸೆ ಮೂಡಿಸಿದ್ದಾನೆ.

Leave a Reply

Your email address will not be published. Required fields are marked *