Breaking
23 Dec 2024, Mon

ಕಾಂಗ್ರೆಸ್ ಸರ್ಕಾರದಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್ ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್ ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ ಎಂದರು.

Leave a Reply

Your email address will not be published. Required fields are marked *