ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ರಸ್ತೆಯಲ್ಲಿ ಬೀದಿ ದೀಪದ ಕೆಳಗೆ ಹಣವನ್ನು ಪಣವಾಗಿ ಇಟ್ಟು ಇಸ್ಪೀಟ್ ಆಟ ಆಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ನಿಂಗಪ್ಪ ಗಡ್ಡದವರ(37), ನಿಂಗಪ್ಪ ಅಂಬಿಗೇರ(23), ರಾಘವೇಂದ್ರ ಸಣ್ಣತಂಗೇರ(28) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ ಇಸ್ಪೀಟ್ ಎಲೆಗಳು, ನಗದು, ಒಂದು ಹಳೆಯ ದಿನ ಪತ್ರಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





