Breaking
25 Sep 2026, Fri

ಕಲಬುರಗಿಯಲ್ಲಿ ಟಿಪ್ಪ‌ರ್ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರು ಯುವಕರು ಸಾವು

ಕಲಬುರಗಿ: ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನ.11ರಂದು ನಡೆದಿದೆ.

ಮೃತರನ್ನು ಜೇವರ್ಗಿ ತಾಲೂಕಿನ ಕೋಳುಕುರ ಗ್ರಾಮದ ಭಾಗಣ್ಣ ಆಡಿನ್ (34) ಶರಣಬಸಪ್ಪ ಪೂಜಾರಿ (32) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಬೈಕಿನಲ್ಲಿ ಜೇವರ್ಗಿಯಿಂದ ಕಲಬುರಗಿ ಕಡೆಗೆ ಹೋಗುತ್ತಿರುವಾಗ ಎದುರಿಗೆ ಬಂದ ಟಿಪ್ಪ‌ರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *