Breaking
22 Mar 2026, Sun

ಬಂಟ್ವಾಳ: ರಾಜ್ಯ ಮಟ್ಟದ ಬಾಲಕಿಯರ ಕರಾಟೆ ಸ್ಪರ್ಧೆ: ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಾನ್ವಿ.ಕೆ

ಬಂಟ್ವಾಳ: ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ.ಕೆ. ರವರು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಅಶೋಕ್ ಆಚಾರ್ಯ ಬಂಟ್ವಾಳ ಇವರ ಶಿಷ್ಯೆಯಾಗಿರುವ ಸಾನ್ವಿ ಕೆ. ಮುಂದೆ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಇವರು ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *