Breaking
23 Mar 2026, Mon

ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್, ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್ ಎಂದು ಗುರುತಿಸಲಾಗಿದೆ.

ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮೊಹಮ್ಮದ್ ನಿಗಾರೀಸ್ ತನ್ನ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ
ಇನ್ನೂ ಡ್ರೈವರ್ ಮತ್ತು ಪೈಂಟರ್ ಅಗಿದ್ದ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್‌ ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿದ್ದನು ಎನ್ನಲಾಗಿದೆ ಇವರನ್ನು ಗಂಡಿ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *