Breaking
25 Sep 2026, Fri

ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನ ಬಂಧನ

ಬೆಳ್ತಂಗಡಿ : ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯವನಾಗಿದ್ದು ಪ್ರಸ್ತುತ ಮಂಗಳೂರು ಸುರತ್ಕಲ್ ಕಾನದಲ್ಲಿ ವಾಸಿಸುತ್ತಿರುವ ಅಬೂಬಕ್ಕರ್ (71) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಅವರ ಮನೆಯಲ್ಲಿ ಅ.2 ರಿಂದ ಅ.6 ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ ರೂ. 9.5 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದ್ದು ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನ.11 ರಂದು ರಾತ್ರಿ ವೇಣೂರು ಪೊಲೀಸ್ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಸ್ಪದವಾಗಿ ಸ್ಕೂಟರ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ತಡೆದು ಪರಿಶೀಲಿಸಿದಾಗ ಮಂಗಳೂರಲ್ಲಿ ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *