Breaking
23 Mar 2026, Mon

ಮಂಗಳೂರಿನ ಯುವತಿ ನಾಪತ್ತೆ: ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಮನೆಯಿಂದ ಕೆಲಸಕ್ಕೆಂದು ತೆರಳಿದ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್ ಪೇಟೆಯ ಕುಮಾರ್ ಅವರ ಪತ್ನಿ ಸುಮಾ ಎನ್.(24) ಎಂದು ಗುರುತಿಸಲಾಗಿದೆ. ಇವರು ಮಂಗಳೂರು ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ನ.10 ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದ ಸುಮಾ ಕೆಲಸಕ್ಕೆ ಹಾಜರಾಗಿಲ್ಲ. ಪತಿ ಕುಮಾರ್ ಅವರು ಆಕೆಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಮಾಹಿತಿ ದೊರಕದ ಹಿನ್ನಲೆಯಲ್ಲಿ ಕುಮಾರ್ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.

ನಾಪತ್ತೆಯಾದ ಮಹಿಳೆ ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಉದ್ದ ತೋಳಿನ ಅಂಗಿ ಧರಿಸಿದ್ದ ಅವರು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *