ಮಂಗಳೂರು: ಕೇಂದ್ರ ಸರ್ಕಾರದ PM – ABHIM (ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ ) ಯೋಜನೆಯಡಿ ದ.ಕ. ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣಕ್ಕೆ ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಿದರು.
ಈ ಹಿನ್ನಲೆಯಲ್ಲಿ ಅತ್ತಾವರದ ಐ.ಎಂ.ಎ ಭವನದಲ್ಲಿ ನಡೆದ ಶಿಲಾನ್ಯಾಸದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ವಹಿಸಿದ್ದರು.
ಒಟ್ಟು 24ಕೋ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಟ್ಟಡವು ಒಟ್ಟು 5,460 ಚ.ಮೀ. ವಿಸ್ತೀರ್ಣ ಹೊಂದಿದ್ದು, ನೆಲಮಹಡಿ ಸಹಿತ ಒಟ್ಟು 3 ಅಂತಸ್ತುಗಳನ್ನು ಒಳಗೊಂಡಿದೆ.