Breaking
25 Sep 2026, Fri

ಉಡುಪಿಯ ಪರ್ಕಳದಲ್ಲಿ ಮಂಗಳೂರು ಮೂಲದ ವ್ಯಕ್ತಿ ಸಾವು

ಉಡುಪಿ : ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಪರ್ಕಳದಲ್ಲಿ ನ.12 ರಂದು ನಡೆದಿದೆ.

ಮೃತರನ್ನು ಮಂಗಳೂರು ಮೂಲದ ದಾಮೋದರ ಗೌಡ (50) ಎಂದು ಗುರುತಿಸಲಾಗಿದೆ.

ದಾಮೋದರ ಗೌಡ ಪರ್ಕಳ ಪಟ್ಟಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವೇಳೆ ಅವರನ್ನು ಪರೀಕ್ಷಿಸಿದ ವೈದ್ಯರು ಆದಾಗಲೇ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮೃತರ ಬಗ್ಗೆ ಮಾಹಿತಿ ಇರುವವರು ಅಥವಾ ಅವರ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *