Breaking
25 Sep 2026, Fri

ನವೀನ್ ನೆರಿಯ ವಿರುದ್ಧ ದ್ವೇಷ ಭಾಷಣ ಆರೋಪ, ಪ್ರಕರಣ ವಜಾಗೊಳಿಸುವಂತೆ ಹೈಕೋರ್ಟ್ ಆದೇಶ

ಕಡಬ: ದ್ವೇಷ ಭಾಷಣ ಮಾಡಿದ ಆರೋಪ ಮೇಲೆ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಕಾರ್ಯದರ್ಶಿಯಾಗಿದ್ದ ನವೀನ್ ನೆರಿಯ ಮೇಲೆ ದಾಖಲಾಗಿದ್ದ ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.

ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೊಲೀಸರು ತೆರಳಿ ಫೋಟೋ ತೆಗೆಯುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್.4 ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯರವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಪ್ರಶ್ನಿಸಿ ನವೀನ್ ನೆರಿಯಾ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ನ. 12 ರಂದು ನವೀನ್ ನೆರಿಯ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ರದ್ದುಗೊಳಿಸಿಸುವಂತೆ ಆದೇಶಿಸಿದೆ.

Leave a Reply

Your email address will not be published. Required fields are marked *