ರಾಯಚೂರು: ಕನಕಗಿರಿ ತಾಲೂಕಿನ ಸೂಳೆಕಲ್- ಅರಳಹಳ್ಳಿ ರಸ್ತೆಯ ಮಧ್ಯೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನ.12 ನಡೆದಿದೆ.
ಮೃತಪಟ್ಟ ಮಹಿಳೆಯನ್ನು ವತ್ಸಲಾ(39) ಎಂದು ಗುರುತಿಸಲಾಗಿದೆ.

ರಾಯಚೂರಿನ ದೇವದುರ್ಗಾದಿಂದ ಲಿಂಗಸೂರು-ಗಂಗಾವತಿ ರಸ್ತೆ ಮೂಲಕ ಗಂಗಾವತಿ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡಿದ್ದ ಕಾರು ಚಾಲಕ ತಿರುಮಲೇಶ ಮತ್ತು ಮೃತರ ಮಗಳು ಅನುಜ್ಞಾ ಅವರನ್ನು ಸ್ಥಳೀಯರು ತಕ್ಷಣವೇ ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




