Breaking
21 Mar 2026, Sat

ರೆಖ್ಯ ಗ್ರಾಮದಲ್ಲಿ ಆಕಸ್ಮಿಕವಾಗಿ ಮನೆಗೆ ತಗುಲಿದ ಬೆಂಕಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದಲ್ಲಿ ಇಂದು(ನ.13) ಮುಂಜಾನೆಯ ವೇಳೆ ನಡೆದಿದೆ.

ಕೊಲಾರು ನಿವಾಸಿಯಾಗಿರುವ ಬಾಲಕೃಷ್ಣ ಅವರ ವಾಸದ ಬೆಂಕಿಗೆ ಆಹುತಿಯಾಗಿದೆ.

ಮನೆ ಮಂದಿ ಕೆಲಸಕ್ಕೆ ಹೋಗಿದ್ದು ಈ ಮೂಲಕ ಜೀವ ಹಾನಿ ತಪ್ಪಿದಂತಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ 45,000 ಹಣ ಒಡವೆ ಮಕ್ಕಳ ಪುಸ್ತಕ ಬಟ್ಟೆ ಬರೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಮನೆ ಮಂದಿಯೆಲ್ಲ ಆತಂಕದಲ್ಲಿದ್ದಾರೆ.

ಘಟನಾ ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನಾರ್ಧನ್ ರೆಖ್ಯ, ಮತ್ತು ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *