ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮಂಜಲಡ್ಪು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





