Breaking
26 Sep 2026, Sat

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಭಾರತಿ ರಾಜೇಂದ್ರ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಗ್ರಾಮೀಣ ಇದರ ನೂತನ ಕಾರ್ಯದರ್ಶಿಯಾಗಿ ಬಂಟ್ವಾಳ ತಾಲ್ಲೂಕಿನ ಶ್ರೀಮತಿ ಭಾರತಿ ರಾಜೇಂದ್ರ ಅವರು ನೇಮಕಗೊಂಡಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ರವರ ನೇತೃತ್ವದಲ್ಲಿ ಆಯ್ಕೆ ಮಾಡಲಾಗಿದ್ದು, ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್ ಅವರು ಶುಭ ಹಾರೈಸಿದ್ದಾರೆ.

ಸದ್ರಿ ಇವರು ಬಂಟ್ವಾಳ ತಾಲ್ಲೂಕಿನ ಚೆನ್ನೈತೋಡಿ ಗ್ರಾಮ ಪಂಚಾಯಿತಿನಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಪ್ರಸ್ತುತ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ಮತ್ತು ಪಂಚ ಗ್ಯಾರಂಟಿ ಯೋಜನೆಯ ಬಂಟ್ವಾಳ ತಾಲ್ಲೂಕಿನ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ ಇವರ ಸೂಚನೆ ಮೇರೆಗೆ ರಾಜ್ಯದಲ್ಲಿ ನೂತನವಾಗಿ ಉದ್ಘಾಟನೆಗೊಳ್ಳಲಿರುವ ಗ್ರಹಲಕ್ಷ್ಮೀ ಯೋಜನೆಯ “ಉದ್ದೇಶಿತ ಗೃಹಲಕ್ಷ್ಮೀ ವಿವಿದ್ದೋದ್ದೇಶ ಸಹಕಾರಿ ಸಂಘ ನಿಯಮಿತ ಬೆಂಗಳೂರು” ಇದರ ಶೇರು ಪಾಲುದಾರರಾಗಿ ಕೂಡ ಆಯ್ಕೆ ಮಾಡಿರುತ್ತಾರೆ. ಈ ಸಹಕಾರ ಸಂಘವು ದಿನಾಂಕ ನ. 19 ರಂದು ಬೆಂಗಳೂರು ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದ್ದು ಈ ಕಾರ್ಯಕ್ರಮದಲ್ಲಿ ಶ್ರೀಮತಿ ಭಾರತಿ ರಾಜೇಂದ್ರರವರು ಪಾಲ್ಗೊಳಲಿದ್ದಾರೆ.

Leave a Reply

Your email address will not be published. Required fields are marked *