Breaking
26 Sep 2026, Sat

ಮನೆಯೊಂದರಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ: ಇಬ್ಬರು ಪರಾರಿ: ಓವ೯ ಪೊಲೀಸ್ ವಶಕ್ಕೆ

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದ್ದು, ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮನೆಯಲ್ಲಿದ್ದ ಶಕೂರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *