ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಇಂದು ನಿಧನರಾದರು.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ನವೆಂಬರ್ 2ರಿಂದ ಜಯನಗರ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರಿಗೆ ಮಕ್ಕಳಿರಲಿಲ್ಲ. ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ಗಿಡಗಳನ್ನು ನೆಟ್ಟು ಪ್ರತೀ ದಿನ ನೀರು ಹಾಕಿ ಮರಗಳಾಗುವಂತೆ ಬೆಳೆಸಿದ್ದರು. ಮರಗಳನ್ನೇ ಮಕ್ಕಳಂತೆ ನೋಡಿಕೊಂಡಿದ್ದ ಇವರಿಗೆ ಸಾಲುಮರದ ತಿಮ್ಮಕ್ಕ ಎಂಬ ಅನ್ವರ್ಥನಾಮವೇ ಬಂದಿತ್ತು.
ಇವರಿಗೆ ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ‘ನಾಡೋಜ’ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಸೇರಿದಂತೆ 20ಕ್ಕೂ ಹೆಚ್ಚು ಪ್ರಶಸ್ತಿಗಳು ಲಭಿಸಿದೆ.





