Breaking
10 May 2026, Sun

ಲಾರಿಯ ಟಯರ್ ಸ್ಫೋಟ: ಮೊಗ್ರಾಲ್ ಪುತ್ತೂರು ನಲ್ಲಿ ಮಗುಚಿ ಬಿದ್ದ ಲಾರಿ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್ ಪುತ್ತೂರು ನಲ್ಲಿ ಮೀನು ಸಾಗಿಸುತ್ತಿದ್ದ ಲಾರಿಯ ಟಯರ್ ಸ್ಪೋಟಗೊಂಡು ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ನ.13 ರಂದು ರಾತ್ರಿ ನಡೆದಿದೆ.

ಲಾರಿ ಚಾಲಕನು ಕೋಜಿಕ್ಕೋಡ್ ನಿಂದ ಉಳ್ಳಾಲಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ವಿಜಿನ್ ಕುಮಾರ್ (35) ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮೀನುಗಳನ್ನು ಇತರ ಎರಡು ವಾಹನಗಳಿಗೆ ತುಂಬಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Leave a Reply

Your email address will not be published. Required fields are marked *