Breaking
10 May 2026, Sun

ಬಿ.ಸಿ ರೋಡ್ ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, ಆರು ಮಂದಿ ಗಂಭೀರ

ಬಂಟ್ವಾಳ: ಕಾರೊಂದು ವೃತ್ತವೊಂದಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಮುಖ್ಯ ವೃತ್ತದಲ್ಲಿ ನ.15 ರಂದು ಬೆಳಗ್ಗೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಕಾರು ಇಂದು ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಬಂದು ಢಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದಾರೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *