ಚೆನ್ನೈ: ಭಾರತೀಯ ವಾಯುಪಡೆಯ ವಿಮಾನ ತಮಿಳುನಾಡಿನ ಚೆನ್ನೈನಲ್ಲಿ ಪತನವಾಗಿದ್ದು, ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ರಾಜಧಾನಿ ಚೆನ್ನೈನ ತಾಂಬರಂ ಬಳಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ ಭಾರತೀಯ ವಾಯುಪಡೆಯ ಪಿಸಿ-7 ಪಿಲಾಟಸ್ ತರಬೇತಿ ವಿಮಾನ ಪತನಗೊಂಡಿದ್ದು, ವಿಮಾನವು ಅರಣ್ಯ ಪ್ರದೇಶದಲ್ಲಿ ನೆಲಕ್ಕೆ ಅಪ್ಪಳಿಸುವ ಮೊದಲು ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಈ ಅಪಘಾತದ ಕಾರಣವನ್ನು ತನಿಖೆ ಮಾಡಲು ವಾಯುಪಡೆಯು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದ್ದು, ಪೈಲಟ್ ಗಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎ0ದು ಐಎಎಫ್ ದೃಢಪಡಿಸಿದೆ.




