Breaking
26 Sep 2026, Sat

ನಗ-ನಗದು ಕಳವುಗೈದ ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಚೆಂಬು ಗ್ರಾಮದ ಮನೆಯೊಂದರಿಂದ ನಗ-ನಗದು ಕಳವುಗೈದ ಇಬ್ಬರು ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನೂ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾದ ಸಿದ್ದಲಿಂಗು ಎನ್. (28) ಮತ್ತು ರಘು ಎನ್. (26) ಎಂದು ಗುರುತಿಸಲಾಗಿದೆ.

ನ.5ರಂದು ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ. ಅವರ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ಅಂದಾಜು 15,000 ರೂ. ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳನ್ನು ಕದ್ದೊಯ್ದ ಪರಾರಿಯಾಗಿದ್ದರು.

ಬಂಧಿತ ಆರೋಪಿಗಳಿಂದ 8,50,000 ರೂ. ನಗದು, 120 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *