Breaking
12 Aug 2026, Wed

ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ: ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ನಡೆದಿದೆ.

ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.

ಈಕೆ ತೀರ್ಥಹಳ್ಳಿಯ ಬಾಳೆಬಯಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಬಿಎ ವ್ಯಾಸಾಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *