Breaking
27 Jun 2026, Sat

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ, ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್‌ಗಳನ್ನು ವೀಕ್ಷಿಸಿದರು.

ಈ ಸಂದರ್ಭ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುರ್ಯಗುತ್ತು, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್, ಎಸ್‌ಡಿಎಂ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್, ಹೆಗ್ಗಡೆಯವರ ಆಪ್ತ ಸಹಾಯಕ ವೀರೂ ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *