Breaking
23 Mar 2026, Mon

ಮೇಕೆದಾಟು ಪ್ರಕರಣದಲ್ಲಿ ತಮಿಳುನಾಡಿನ ಅರ್ಜಿ ವಜಾ, ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್.ಪೂಜಾರಿ ಸಂತಸ

ಮಂಗಳೂರು: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡಿನ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂಕೋರ್ಟ್ ರಾಜ್ಯದ ಪರವಾಗಿ ತೀರ್ಪು ನೀಡಿದ್ದು, ಕರ್ನಾಟಕ ಸರಕಾರಕ್ಕೆ ದೊರೆತ ಮಹತ್ವದ ಗೆಲುವು ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.

ಮೇಕೆದಾಟು ಯೋಜನೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಕನಸ್ಸಾಗಿತ್ತು. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ. ಕರ್ನಾಟಕದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದ್ದು, ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ.

ಈ ಮಹತ್ವದ ಗೆಲುವಿಗೆ ಸಹಕರಿಸಿದ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಕಾನೂನು ತಜ್ಞರ ತಂಡ, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಪದ್ಮರಾಜ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *