Breaking
12 Nov 2026, Thu

ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಪಣಂಬೂರು ಬಳಿ ನ.15 ರ ಬೆಳಗ್ಗೆ ನಡೆದಿದೆ.

ಪಣಂಬೂರು ಸಿಗ್ನಲ್ ನ ಬಳಿ ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಈ ಸಂದರ್ಭ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿ ಅಪ್ಪಚ್ಚಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *